ರಾಜ್ಯಕ್ಕೆ ಮುಂಗಾರು ಕಾಲಿಟ್ಟು ತಿಂಗಳುಗಳೆ ಕಳೆದರೂ ಸಹ ಕೆಲ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮ ಕೃಷಿಗೆ ಭೂಮಿ ಹಸನು ಮಾಡಿಕೊಂಡು ಬಿತ್ತನೆ ಮಾಡಿದ್ದ ರೈತರು ಆತಂಕಗೊಂಡಿದ್ದಾರೆ.
ಹೀಗಾಗಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಗ್ರಾಮಸ್ಥರು ಮಳೆಗಾಗಿ ಪ್ರಾರ್ಥಿಸಿ ದೇವರ ಮೊರೆ ಹೋಗಿದ್ದಾರೆ. ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಐದು ದಿನಗಳ ಕಾಲ ನಿರಂತರ ಶಿವ ಭಜನೆ ಮಾಡಿದ್ದಾರೆ.
ಜೂನ್ 28 ರಂದು ಬೆಳಗ್ಗೆ ಭಜನೆ ಆರಂಭಿಸಿದ ಗ್ರಾಮಸ್ಥರು ಜುಲೈ 2ರಂದು ಗ್ರಾಮದ ಇತರೆ ಎಲ್ಲ ದೇವಸ್ಥಾನಗಳಿಗೆ ತೆರಳಿ ಕಾಯಿ ಒಡೆದು ಪೂಜೆ ಸಲ್ಲಿಸಿದ ಬಳಿಕ ಸಂಜೆ ಭಜನೆಯನ್ನು ಮುಕ್ತಾಯಗೊಳಿಸಿದ್ದಾರೆ.