
ಹಳದಿ ರೈನ್ಕೋಟ್ ಧರಿಸಿದ ಮಗುವೊಂದು ಮಳೆಯನ್ನು ಆನಂದಿಸುತ್ತಿರುವ ವಿಡಿಯೋ ಇದಾಗಿದೆ. ಮಗು ಮಳೆಯೊಂದಿಗೆ ಆಟವಾಡುತ್ತಾ ಹಾಗೆ ರಸ್ತೆಯ ಮೇಲೆ ಮಲಗಿದೆ. ಬ್ಯುಟೆಂಗೆಬೀಡೆನ್ ಎಂಬ ಟ್ವಿಟ್ಟರ್ ಖಾತೆಯಲ್ಲಿ ಈ ಹೃದಯಸ್ಪರ್ಶಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
ನೆದರ್ಲ್ಯಾಂಡ್ ನಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಜೂನ್ 9 ರಂದು ಹಂಚಿಕೊಳ್ಳಲಾದ ವಿಡಿಯೋ ಸುಮಾರು 23.3 ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.