
ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, ರಸ್ತೆ ಕೊಚ್ಚಿ ಹೋಗಿದೆ. ಜೊತೆಗೆ ಜಮೀನುಗಳಲ್ಲಿ ನೀರು ನಿಂತಿರುವ ಕಾರಣ ಬೆಳೆ ನಷ್ಟವೂ ಆಗಿದೆ. ಇಂದು ಬೆಳಗ್ಗೆಯಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಯಾವುದೇ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.