ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಗುಡುಗು-ಸಿಡಿಲು ಹಾಗೂ ಭಾರಿ ಗಾಳಿಯಿಂದ ಕೂಡಿದ ಮಳೆ ಅಬ್ಬರಕ್ಕೆ ಬೆಳೆ ನಷ್ಟದ ಜೊತೆಗೆ ಜನ-ಜಾನುವಾರುಗಳ ಜೀವ ಹಾನಿಯೂ ಸಂಭವಿಸಿದೆ.
ಇದರ ಮಧ್ಯೆ ಮಳೆ ಕುರಿತು ಭಾರತೀಯ ಹವಾಮಾನ ಇಲಾಖೆ ಮತ್ತೊಂದು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಅಲ್ಲದೆ ಆಂಧ್ರಪ್ರದೇಶ, ಛತ್ತಿಸ್ಗಢ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲೂ ಸಹ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದ್ದು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂ ನಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.