ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಿರು ಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಅಕಾಲಿಕ ಮಳೆಯಿಂದಾಗಿ ಭೂಮಿ ತಂಪಾಗುತ್ತಿದೆಯಾದರೂ ಮಿಂಚು, ಗುಡುಗಿನ ಜೊತೆ ಭಾರಿ ಗಾಳಿಯೊಂದಿಗೆ ಮಳೆ ಸುರಿದ ವೇಳೆ ಬೆಳೆ ನಷ್ಟವೂ ಆಗುತ್ತಿದೆ.