ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವಂತಾಗಿದೆ. ಹೀಗಾಗಿಯೇ ಮಳೆ ಹೆಚ್ಚಾಗಿರುವ ಕೆಲ ಜಿಲ್ಲೆ, ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸುತ್ತಿದ್ದಾರೆ.
ಇದರ ಮಧ್ಯೆ ಮಳೆ ಹೆಚ್ಚಾಗಿರುವ ಸಂದರ್ಭದಲ್ಲಿ ರಜೆ ನೀಡುವ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳ ಶಾಲೆಗಳಿಗೆ ಆಯಾ ಶಾಲಾ ಮುಖ್ಯೋಪಾಧ್ಯಾಯರೇ ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಅಲ್ಲದೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಂದ ಮಕ್ಕಳನ್ನು ದೂರ ಇರಿಸಬೇಕು ಎಂದು ತಿಳಿಸಲಾಗಿದ್ದು, ಅಂತಹ ಕಟ್ಟಡಗಳು ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿಗಳನ್ನು ನಡೆಸುವುದಾಗಲಿ ಅಥವಾ ಶೌಚಾಲಯ ಬಳಸುವುದನ್ನು ನಿಲ್ಲಿಸಬೇಕು ಎಂದು ಸೂಚಿಸಲಾಗಿದೆ.