alex Certify ‘ಮಸಾಜ್ ಪಾರ್ಲರ್’ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಸಾಜ್ ಪಾರ್ಲರ್’ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ರೇಪ್

ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಪಾರ್ಲರ್ ಮಾಲೀಕರಿಗೆ ಪರಿಚಯವಿದ್ದ ವ್ಯಕ್ತಿಯೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಈಗ ರವೀಂದ್ರ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿವರ: ಬೆಂಗಳೂರು ನಿವಾಸಿಯಾಗಿದ್ದ 21 ವರ್ಷದ ಈ ಯುವತಿ, ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದು, ಪಾರ್ಲರ್ ಮಾಲೀಕರಿಗೆ ಪರಿಚಿತನಾಗಿದ್ದ ಆರೋಪಿ ಆಗಾಗ ಬಂದು ಹೋಗುತ್ತಿದ್ದ.

ಹೀಗಾಗಿ ಯುವತಿಗೂ ಆತ ಪರಿಚಯವಾಗಿದ್ದು, ಫೆಬ್ರವರಿ 14ರಂದು ಪಾರ್ಲರ್ ನಲ್ಲಿಯೇ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಯುವತಿ ನೀಡಿದ ದೂರಿನ ಮೇರೆಗೆ 42 ವರ್ಷದ ಆರೋಪಿಯನ್ನು ಬಂಧಿಸಿರುವ ಜಯನಗರ ಠಾಣೆ ಪೊಲೀಸರು, ಪಾರ್ಲರ್ ಮಾಲೀಕರಾದ ಮಹಿಳೆಯನ್ನೂ ಆರೋಪಿಯನ್ನಾಗಿ ಹೆಸರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...