alex Certify ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ

ದೇಶದಲ್ಲಿ ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಕೋಲಾಹಲವೆಬ್ಬಿದೆ. ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್‌ಗಳನ್ನು ತೆಗೆದುಹಾಕಿದೆ. ಈ ವಿವಾದದ ಮಧ್ಯೆ, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕು ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ ಮತ್ತು ನ್ಯಾಯಮೂರ್ತಿ ವಿಕಾಸ್ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಪೀಠ, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದು ಸಾಂವಿಧಾನಿಕ ಹಕ್ಕಲ್ಲ ಎಂದು ಕಾನೂನು ಹೇಳುತ್ತದೆ ಅಂತಾ ಹೇಳಿದೆ.

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಧಾರ್ಮಿಕ ಸ್ಥಳದ ಒಳಗೆ ಅಳವಡಿಸಲಾಗಿರುವ ಧ್ವನಿವರ್ಧಕದ ಶಬ್ಧವು ಆವರಣದ ಹೊರಗೆ ಕೇಳಬಾರದು ಎಂದು ಹೇಳಿದ್ದರು. ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಯುಪಿ ಸರ್ಕಾರವು ಧಾರ್ಮಿಕ ಸ್ಥಳಗಳಿಂದ ಹಲವಾರು ಧ್ವನಿವರ್ಧಕಗಳನ್ನು ತೆಗೆದುಹಾಕಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...