ಚಿತ್ರದುರ್ಗ: ಮುರುಘಾ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಪೊಲೀಸರು ಮರುಘಾ ಸ್ವಾಮೀಜಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನ್ಯಾಯಾಲಯದಲ್ಲಿ ಇಂದು ಸ್ವಾಮೀಜಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಮಠದ ಪರ ವಕೀಲರು ರೆಗ್ಯುಲರ್ ಬೇಲ್ ಗಾಗಿ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಪೊಲೀಸರು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಲಯ ಶರಣರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವ ಇಲ್ಲವೇ ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.
ಮರುಘಾ ಮಠದ ಪೀಠಾಧಿಪತಿಯಾಗಿದ್ದ ಶ್ರೀಗಳು ಮಠಕ್ಕೆ ಆರೋಪಿಯಾಗಿ ಬಂದು ಸ್ಥಳ ಮಹಜರು ನಡೆಸಿದ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದಾರೆ.