alex Certify ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಳಿ ಚರಣ್​ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಳಿ ಚರಣ್​ ಅರೆಸ್ಟ್

ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್​ ಅಲಿಯಾಸ್​ ಅಭಿಜಿತ್​ ಸರಾಗ್​ನನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ.‌

ಡಿಸೆಂಬರ್​ 26ರಂದು ನಡೆದ ಧಾರ್ಮಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕಾಳಿ ಚರಣ್,​​ ಗಾಂಧಿ ಹಂತಕ ನಾಥೂರಾಂ ಗೋಡ್ಸೆಯನ್ನು ಹಾಡಿ ಹೊಗಳಿದ್ದರು. ಧರ್ಮವನ್ನು ರಕ್ಷಿಸುವ ಸಲುವಾಗಿ ಕಟ್ಟಾ ಹಿಂದೂ ನಾಯಕನನ್ನು ಸರ್ಕಾರದ ಮುಖ್ಯಸ್ಥನನ್ನಾಗಿ ಆಯ್ಕೆ ಮಾಡಿ ಎಂದು ಹೇಳಿದ್ದರು.

ಕಾಳಿಚರಣ್​​ ಮಧ್ಯಪ್ರದೇಶದ ಖಜುರಾಹೊದಿಂದ 25 ಕಿಮೀ ದೂರದಲ್ಲಿರುವ ಬಾಗೇಶ್ವರ್ ಧಾಮ್ ಬಳಿ ಬಾಡಿಗೆ ವಸತಿಗೃಹದಲ್ಲಿ ತಂಗಿದ್ದರು. ಇಂದು ಮುಂಜಾನೆ 4 ಗಂಟೆಗೆ ರಾಯ್‌ಪುರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಾಳಿ ಚರಣ್​ ವಿರುದ್ಧ ಐಪಿಸಿ ಸೆಕ್ಷನ್​ 294,295 ಎ,298,505(2) ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಕೇಸ್​ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...