ಬೆಂಗಳೂರು: ಭಗತ್ ಸಿಂಗ್ ಕುರಿತ ಪಾಠವನ್ನು ಪಠ್ಯದಿಂದ ತೆಗೆಯಲು ನಿರ್ಧರಿಸಿರುವುದು ದೇಶ ವಿರೋಧಿ ಕ್ರಮವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಭಗತ್ ಸಿಂಗ್ ಪಾಠವನ್ನು ತೆಗೆದು ಹಾಕುತ್ತಿದ್ದಾರೆ. ನಾಳೆ ಮಹಾತ್ಮ ಗಾಂಧಿ ಅವರನ್ನು ಕೂಡ ಪಠ್ಯಯಿಂದ ತೆಗೆದು ಹಾಕುತ್ತಾರೆ. ಬ್ರಿಟಿಷ್ ವಸಾಹತುಶಾಹಿಯಿಂದ ನಮ್ಮನ್ನು ಮುಕ್ತಗೊಳಿಸಿದ ಅವರ ತ್ಯಾಗ ಬಲಿದಾನವನ್ನು ನಾವು ಎಂದಿಗೂ ಮರೆಯಬಾರದು ಎಂದು ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.