alex Certify ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯನ ಮನೆಯಲ್ಲಿ ಗೋ ಮಾಂಸ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯನ ಮನೆಯಲ್ಲಿ ಗೋ ಮಾಂಸ ಪತ್ತೆ

ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಶಾಮೀರ್ ಖಾನ್ ಅವರ ಮನೆಯಲ್ಲಿ ಗೋಮಾಂಸ ಪತ್ತೆಯಾಗಿದೆ. ಈ ಸಂಬಂಧ ಅವರ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.

ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ಟಿಪ್ಪು ನಗರದ ಮೂರನೇ ತಿರುವಿನಲ್ಲಿರುವ ಶಾಮೀರ್ ಖಾನ್ ಅವರ ಮನೆಯ ಮೇಲೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.

ಈ ವೇಳೆ 40 ಕೆಜಿ ಗೋಮಾಂಸ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡಿರುವ ಪೊಲೀಸರು ಪಾಲಿಕೆ ಸದಸ್ಯ ಶಾಮೀರ್ ಖಾನ್ ಅವರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...