alex Certify ಮಹಿಳಾ ಟಿ20 ವಿಶ್ವಕಪ್: ಇಂದು ನಡೆಯಲಿದೆ ಭಾರತ ಹಾಗೂ ಪಾಕಿಸ್ತಾನ ಕಾಳಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಟಿ20 ವಿಶ್ವಕಪ್: ಇಂದು ನಡೆಯಲಿದೆ ಭಾರತ ಹಾಗೂ ಪಾಕಿಸ್ತಾನ ಕಾಳಗ

ಪುರುಷರ ಕ್ರಿಕೆಟ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ಪಂದ್ಯವೆಂದರೆ ಭಾರತದಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ.

ಅದೇ ರೀತಿ ಇಂದು ಮಹಿಳಾ ಟಿ ಟ್ವೆಂಟಿ ವಿಶ್ವಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು,  ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಟಿ20 ವಿಶ್ವಕಪ್ ನ ನಾಲ್ಕನೇ ಪಂದ್ಯ ಇದಾಗಿದೆ, ಗ್ರೂಪ್ ಬಿ ನಲ್ಲಿ ಭಾರತ,  ಪಾಕಿಸ್ತಾನ, ವೆಸ್ಟ್ ಇಂಡೀಸ್, ಐರ್ಲೆಂಡ್, ಇಂಗ್ಲೆಂಡ್ ಸೇರಿದಂತೆ 5 ತಂಡಗಳು ಗ್ರೂಪ್ ಬಿ ನಲ್ಲಿವೆ.

ಮಹಿಳಾ ಭಾರತ ತಂಡವನ್ನು ಹರ್ಮಾನ್ ಪ್ರೀತ್ ಕೌರ್ ನಾಯಕಿಯಾಗಿ ಮುನ್ನಡೆಸಲಿದ್ದಾರೆ. ಸ್ಟಾರ್ ಆಟಗಾರ್ತಿಯರಾದ ಸ್ಮೃತಿ  ಮಂದಾನ,  ಆಲ್ ರೌಂಡರ್ ದೀಪ್ತಿ ಶರ್ಮಾ ಹಾಗೂ ರಾಜೇಶ್ವರಿ ಗಾಯಕ್ವಾಡ್ ಅವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಯುವ ಆಟಗಾರ್ತಿ ಶೆಫಾಲಿ ವರ್ಮಾ ಗೆ ತಂಡದಲ್ಲಿ ಅವಕಾಶ ಸಿಕ್ಕಿದ್ದು, ಯಾವ ರೀತಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...