ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ ಜಿಲ್ಲಾಧ್ಯಕ್ಷನನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಆರೋಪಿ ಅವಿನಾಶ್ ಬಂಧಿತ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ. ಇನ್ನೋರ್ವ ಆರೋಪಿ ಭೀಮ್ ಆರ್ಮಿ ಉಪಾಧ್ಯಕ್ಷ ಪ್ರದೀಪ್ ಪರಾರಿಯಾಗಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆದಿದೆ.
ಹೂಡಿಕೆಗೆ ಉತ್ತಮ ಅಂಚೆ ಕಛೇರಿಯ ಈ ʼಯೋಜನೆʼ
ಚಿತ್ರದುರ್ಗದ ಐಯುಡಿಪಿ ಬಡಾವಣೆಯ ನ್ಯಾಯಬೆಲೆ ಅಂಗಡಿ ಮಹಿಳೆ ರಂಗಮ್ಮ ಎನ್ನುವವರಿಗೆ ಇಬ್ಬರೂ ಆರೋಪಿಗಳು ಬ್ಲಾಕ್ ಮೇಲ್ ಮಾಡಿದ್ದು, ಮಹಿಳೆ ಗ್ರಾಹಕರಿಂದ 10 ರೂಪಾಯಿ ಹೆಚ್ಚುವರಿಯಾಗಿ ಪಡೆದ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಮಹಿಳೆಯಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟು, 15 ಸಾವಿರ ರೂಪಾಯಿ ಹಣ ಪಡೆದಿದ್ದಾರೆ. ಈ ಕುರಿತು ರಂಗಮ್ಮ ಬಡಾವಣೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.