ಬೆಳಗಾವಿ: ಬಿಜೆಪಿಯಲ್ಲಿ ಟಿಕೆಟ್ ಮಿಸ್ ಆದವರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಮುಂದಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಗಾಳ ಹಾಕಲು ಕೈ ಪಡೆ ಪ್ರಯತ್ನಿಸಿದೆ.
ಲಕ್ಷ್ಮಣ ಸವದಿಗೆ ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಮಹೇಶ್ ಕುಮಟಳ್ಳಿಗೆ ಮಣೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
ಈ ನಡುವೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ, ಬೆಳಗಾವಿಯಲ್ಲಿ ಲಕ್ಷ್ಮಣ ಸವದಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿರುವುದಕ್ಕೆ ಇನ್ನಷ್ಟು ಪುಷ್ಠಿ ನೀಡಿದಂತಿದೆ. ಸವದಿ ಆಪ್ತರಾಗಿರುವ ರಾಜು ಕಾಗೆ ಮೂಲಕವಾಗಿಯೇ ಅವರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.