
ಬೆಂಗಳೂರು: ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕರ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.
ಗಲಭೆ ಪ್ರಕರಣ ಸಂಬಂಧ ಕಳೆದ ನವೆಂಬರ್ 16ರಂದು ಸಂಪತ್ ರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಸಿಟಿ ಸಿವಿಲ್ ಕೋರ್ಟ್ ಸಂಪತ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸಿದ್ದರಾಮಯ್ಯ ಕರ್ನಾಟಕದ ’ಟ್ರಂಪ್’ ಎಂದ ಹೆಚ್. ವಿಶ್ವನಾಥ್
ಇದೀಗ ಹೈಕೋರ್ಟ್ ಏಕಸದಸ್ಯ ಪೀಠ, ಮಾಜಿ ಮೇಯರ್ ಗೆ ಜಾಮೀನು ಮಂಜೂರು ಮಾಡಿದೆ.