alex Certify ಮಾಜಿ ಶಾಸಕರ ಜನ್ಮದಿನ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ಮುಗಿಬಿದ್ದ ಅಭಿಮಾನಿಗಳು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಶಾಸಕರ ಜನ್ಮದಿನ ಕಾರ್ಯಕ್ರಮದಲ್ಲಿ ಬಿರಿಯಾನಿಗಾಗಿ ಮುಗಿಬಿದ್ದ ಅಭಿಮಾನಿಗಳು…!

ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಿರಿಯಾನಿಗಾಗಿ ಮುಗಿಬಿದ್ದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ನಾಗಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಮಾಜಿ ಶಾಸಕ ವೈ. ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಬಿರಿಯಾನಿಗಾಗಿ ಮುಗಿಬಿದ್ದ ಘಟನೆ ಕೋಲಾರದಲ್ಲಿ ನಡೆದಿದೆ.

ಹುಟ್ಟುಹಬ್ಬ ಕಾರ್ಯಕ್ರಮವನ್ನು 12ಗಂಟೆಗೆ ನಿಗದಿಪಡಿಸಲಾಗಿದ್ದು ಬಳಿಕ ಬಿರಿಯಾನಿಯನ್ನು ಊಟಕ್ಕಾಗಿ ಸಿದ್ಧಪಡಿಸಲಾಗಿತ್ತು. ಆದರೆ ಕಾರ್ಯಕ್ರಮ ಉದ್ಘಾಟಿಸಬೇಕಾಗಿದ್ದ ಸಚಿವ ಮುನಿರತ್ನ 3 ಗಂಟೆಗೆ ಆಗಮಿಸಿದ್ದಾರೆ. ಇದರಿಂದಾಗಿ ಕಾರ್ಯಕ್ರಮ ವಿಳಂಬವಾಗಿದೆ.

ಬಳಿಕ ಬಿರಿಯಾನಿಯನ್ನು ಬಡಿಸಲು ಮುಂದಾದ ವೇಳೆ ಅಷ್ಟರಲ್ಲಾಗಲೇ ತಾಳ್ಮೆ ಕಳೆದುಕೊಂಡಿದ್ದ ಜನ ನೂಕುನುಗ್ಗಲು ನಡೆಸಿದ್ದಾರೆ. ಬಡಿಸಲು ಬಂದವರನ್ನೂ ಸಹ ಪಕ್ಕಕ್ಕೆ ತಳ್ಳಿ ತಾವೇ ಬಿರಿಯಾನಿಯನ್ನು ಹಾಕಿಕೊಂಡು ಊಟ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...