alex Certify ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಸಿದ್ದರಾಮಯ್ಯ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶೇ.40 ಕಮಿಷನ್ ಆರೋಪ ಹೊತ್ತಿರುವ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ರಾಜ್ಯದಾದ್ಯಂತ ಹೋರಾಟ ನಡೆಸುತ್ತಿದ್ದು, ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಹರಿಹಾಯ್ದಿದ್ದಾರೆ.

ಈಶ್ವರಪ್ಪ ಒಬ್ಬ ಕೊಲೆಗಡುಕ. ಅವನಿಗೆ ಮಾನ ಮರ್ಯಾದೆ ಇದೆಯಾ. ಇಂತಹ ವ್ಯಕ್ತಿಗಳು ಸಾರ್ವಜನಿಕ ಜೀವನದಲ್ಲಿ ಇರಬೇಕಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈಶ್ವರಪ್ಪನನ್ನು ಕೂಡಲೇ ಬಂಧಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...