alex Certify ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕಾಂಗ್ರೆಸ್ ನಲ್ಲೇ ಉಳಿಸಿಕೊಳ್ಳಲು ಕಸರತ್ತು; ಮಗನಿಗೂ ಟಿಕೆಟ್ ನೀಡುವ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕಾಂಗ್ರೆಸ್ ನಲ್ಲೇ ಉಳಿಸಿಕೊಳ್ಳಲು ಕಸರತ್ತು; ಮಗನಿಗೂ ಟಿಕೆಟ್ ನೀಡುವ ಭರವಸೆ

ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂ.ಆರ್. ಸೀತಾರಾಮ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ತಮ್ಮ ಬೆಂಬಲಿಗರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದು, ಇದರ ಮಧ್ಯೆ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಕಸರತ್ತು ನಡೆದಿದೆ.

ಸೋಮವಾರದಂದು ತಮ್ಮನ್ನು ಭೇಟಿ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲೆ ಬಲಿಜ ಸಮಾಜದ ಮುಖಂಡರಿಗೆ ಈ ಕುರಿತು ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂ.ಆರ್. ಸೀತಾರಾಮ್ ಅವರಿಗೆ ವಿಧಾನಸಭೆ ಅಥವಾ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುತ್ತೇವೆ. ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೂ ಚಿಕ್ಕಬಳ್ಳಾಪುರದಿಂದ ಟಿಕೆಟ್ ನೀಡೋಣ ಎಂದು ಹೇಳಿದ್ದಾರೆ.

ಆದರೆ ಎಂ.ಆರ್. ಸೀತಾರಾಮ್ ಅವರಿಂದ ಇದಕ್ಕೆ ಸೂಕ್ತ ಪ್ರತಿಕ್ರಿಯೆ ಸಿಕ್ಕಿಲ್ಲವೆಂದು ಹೇಳಲಾಗಿದ್ದು, ಇತ್ತೀಚೆಗೆ ಅವರು ನಡೆಸಿದ ಪ್ರತ್ಯೇಕ ಸಭೆಗೆ ಎಂ.ಡಿ. ಲಕ್ಷ್ಮೀನಾರಾಯಣ, ಸಂಗಮೇಶ್ ಮೊದಲಾದವರು ತೆರಳಿದ್ದರೆಂದು ಹೇಳಲಾಗಿದೆ. ಸಿದ್ದರಾಮಯ್ಯ ಟಿಕೆಟ್ ನೀಡುವ ಭರವಸೆ ಕೊಟ್ಟಿರುವ ಕಾರಣ ಮುಂದಿನ ದಿನಗಳಲ್ಲಿ ಸೀತಾರಾಮ್ ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...