ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಸೋಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಎಪಿ ನಾಯಕ ಮಾಜಿ ಸಿಎಂ ಕೇಜ್ರಿವಾಲ್ ಗೆ ಸೋಲಾಗಿದ್ದು, ದೆಹಲಿಯಲ್ಲಿ ಭಾರಿ ಮುಖಭಂಗ ಆಗಿದೆ. ದೇಶದ ಗಮನ ಸೆಳೆದ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಆಪ್ ಮೂರನೇ ಬಾರಿ ಅಧಿಕಾರಿಗಳ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿತ್ತು ಆದರೆ ಚುನಾವಣಾ ಫಲಿತಾಂಶದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ.
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ , ದಿಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೋಲು ಅನುಭವಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿನಿಂದಲೂ ಅರವಿಂದ್ ಕೇಜ್ರಿವಾಲ್ ಗೆ ಹಿನ್ನಡೆಯಾಗಿತ್ತು.