ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದಿಂದ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪತ್ನಿ ಡಿಂಪಲ್ ಯಾದವ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ರಾಜಕೀಯದಲ್ಲಿ ಸಕ್ರಿಯರಾಗಿರುವ ಡಿಂಪಲ್ ಯಾದವ್ ಪಕ್ಷದ ಪ್ರಬಲ ಅಭ್ಯರ್ಥಿ ಕೂಡ ಹೌದು. ಸಮಾಜವಾದಿ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಡಿಂಪಲ್ ಯಾದವ್ ತಾವು ಕೊರೊನಾ ಸೋಂಕಿಗೆ ತುತ್ತಾಗಿರುವ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.
ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ನನ್ನ ವರದಿ ಪಾಸಿಟಿವ್ ಎಂದು ಬಂದಿದೆ. ನಾನು ಸಂಪೂರ್ಣ ಲಸಿಕೆಯನ್ನು ಪಡೆದಿದ್ದು ಸೋಂಕಿನ ಯಾವುದೇ ಲಕ್ಷಣಗಳು ಗೋಚರವಾಗಿಲ್ಲ. ನಾನು ಐಸೋಲೇಟ್ ಆಗಿದ್ದೇನೆ ಎಂದು ಡಿಂಪಲ್ ಹಿಂದಿಯಲ್ಲಿ ಟ್ವೀಟಾಯಿಸಿದ್ದಾರೆ.