alex Certify ಮಾಜಿ ಸಿಎಂ ಧರ್ಮಸಿಂಗ್ ಮೊಮ್ಮಗಳು ‘ಆಮ್ ಆದ್ಮಿ’ ಪಕ್ಷಕ್ಕೆ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಧರ್ಮಸಿಂಗ್ ಮೊಮ್ಮಗಳು ‘ಆಮ್ ಆದ್ಮಿ’ ಪಕ್ಷಕ್ಕೆ ಸೇರ್ಪಡೆ

Why is Aam Aadmi Party abbreviated as AAAP in ECI records?ಇತ್ತೀಚಿಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಆಮ್ ಆದ್ಮಿ ಪಕ್ಷ ಈಗ ಗುಜರಾತ್ ಚುನಾವಣೆಯತ್ತ ಚಿತ್ತ ನೆಟ್ಟಿದೆ. ಇದರ ಜೊತೆಗೆ ಕರ್ನಾಟಕದಲ್ಲೂ ಸಹ ಬೇರೂರಲು ಪ್ರಯತ್ನ ನಡೆಸಿದ್ದು, ಇದಕ್ಕೆ ಪೂರಕವಾಗಿ ಹಲವರು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಮೊಮ್ಮಗಳು ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.

ನಿವೃತ್ತ ಎಸಿಪಿ ಸಂಗ್ರಾಮ್ ಸಿಂಗ್ ಅವರ ಪುತ್ರಿಯಾಗಿರುವ ಧರ್ಮಶ್ರೀ ಅವರು ಸೋಮವಾರದಂದು ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದು, ಪಕ್ಷದ ಜನಪರ ಕಾರ್ಯಕ್ರಮಗಳನ್ನು ನೋಡಿ ತಾವು ಆಮ್ ಆದ್ಮಿ ಸೇರ್ಪಡೆಯಾಗಿರುವುದಾಗಿ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...