alex Certify ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು….!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯ ನಂತರ ಶಿವಮೊಗ್ಗದತ್ತ ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಮಲ್ಲೇನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕಾರ್ಯಕ್ರಮ ಮುಗಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಶಿವಮೊಗ್ಗದತ್ತ ಪ್ರಚಾರಕ್ಕಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೆ ಈಡಾಗಿದೆ.

ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳದಲ್ಲಿಯೇ ನಿಂತ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ವಾಹನದ ತಾಂತ್ರಿಕ ವೈಫಲ್ಯದಿಂದ ಸ್ಟೀರಿಂಗ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು, ರಸ್ತೆ ಬದಿಯಲ್ಲಿನ ತೋಟಕ್ಕೆ ವಾಹನವನ್ನು ನುಗ್ಗಿಸಿದ್ದ ಎಂದು ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...