alex Certify ಮಾಜಿ ಸಿಎಂ BSY ಸಮ್ಮುಖದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ BSY ಸಮ್ಮುಖದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಸಂಸದ….!

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಕೆ.ಎನ್. ರಾಜಣ್ಣ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುವಂತೆ ಹೇಳಿದ್ದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಈಗ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ.

ಶನಿವಾರದಂದು ತುಮಕೂರು ಜಿಲ್ಲೆ, ತಿಪಟೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರು ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿಯೇ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಜಿ.ಎಸ್. ಬಸವರಾಜು ಹೇಳಿದ್ದು, ಹೀಗಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...