ಬೆಂಗಳೂರು: ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಅರಣ್ಯ ಭೂಮಿ ಒತ್ತುವರಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ವಿರುದ್ಧ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾನಹಾನಿ ಕೇಸ್ ದಾಖಲಿಸಿದ್ದರು. ಈ ಕುರಿತು ವೆಂಕಟಶಿವಾರೆಡ್ಡಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಜನಪ್ರಿಯ ಮಲಯಾಳಂ ನಟ ಇನ್ನಿಲ್ಲ
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇದೀಗ ರಮೇಶ್ ಕುಮಾರ್ ಅವರಿಗೆ ನೋಟೀಸ್ ಜಾರಿ ಮಾಡಿದ್ದು, 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.