ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಹುತಾತ್ಮರಾದ ಇಂದಿರಾ ಗಾಂಧಿ ಎಂದು ಹೇಳುವ ಬದಲು, ಹುತಾತ್ಮರಾದ ಸೋನಿಯಾ ಗಾಂಧಿ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ತಕ್ಷಣ ಅರಿವಾಗಿ ಕ್ಷಮಿಸಿ ಇಂದಿರಾ ಗಾಂಧಿ…… ಎಂದು ತಪ್ಪನ್ನು ತಿದ್ದಿಕೊಂಡಿದ್ದಾರೆ.
ಭಾಷಣ ಮಾಡಿದ ಡಿ.ಕೆ. ಶಿವಕುಮಾರ್, ಟೀಕೆ ಟಿಪ್ಪಣಿಗಳು ಸಹಜ. ಎಲ್ಲಾ ಸವಾಲುಗಳನ್ನು ಎದುರಿಸಿ ನಿಂತು ಹಲವರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ದೇಶ ಕಟ್ಟಿದ್ದಾರೆ. ಇಂದು ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಮಾಡಲಾಗುತ್ತಿದೆ. ಇದರ ವಿರುದ್ಧ ನಾವು ಹೋರಾಡಬೇಕಿದೆ ಎಂದರು.
ಅರೋರಾ ವಿಡಿಯೋ ಕಂಡು ಮಂತ್ರಮುಗ್ಧರಾದ ನೆಟ್ಟಿಗರು
ಸ್ವಾತಂತ್ರ್ಯ ಹೋರಾಟವನ್ನು ಜಾತಿ, ಧರ್ಮದ ಆಧಾರದ ಮೇಲೆ ಬಳಸಿಕೊಳ್ಳುತ್ತಿರುವುದು ದುರ್ದೈವ. ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಸಾಗಿ ಪಕ್ಷ ಕಟ್ಟಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದು ನಮ್ಮ ಉದ್ದೇಶ. ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವ ಷಡ್ಯಂತ್ರ ನಡೆದಿದೆ. ಮಹನೀಯರ ಹೆಸರು ಬದಲಿಸಿದರೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿರುತ್ತಾರೆ ಎಂದು ಹೇಳಿದರು.