alex Certify ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಿ; ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಿ; ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ

ಬೆಂಗಳೂರು: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ. ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ ನೀಡಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ಈ ಬಗ್ಗೆ ಸಿಂಹಾವಲೋಕನ ಮಾಡಿಕೊಳ್ಳಬೇಕಿದೆ. ಬ್ರಿಟೀಷರು ನಾವು ಹೋದ ಮೇಲೆ ಈ ದೇಶ ನಾಶವಾಗಲಿದೆ ಎಂದು ಹೇಳಿದ್ದರು. ಆದರೆ ಈ ದೇಶವನ್ನು ಇಂದು ಜಗತ್ತು ನೋಡುವಂತೆ ಕಟ್ಟಿದ್ದೇವೆ. 75 ವರ್ಷಗಳ ಹಿಂದೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆದಿತ್ತು. ಪಂಜಾಬ್ ನ ಅಮೃತಸರದಲ್ಲಿ ರಕ್ತದ ಕಲೆ ಇನ್ನೂ ಇದೆ. ಅದರ ಬಲಿದಾನ ವ್ಯರ್ಥ್ಯವಾಗಲು ಬಿಡಬಾರದು ಎಂದರು.

ಪ್ರಾಣವನ್ನೇ ಪಣಕ್ಕಿಟ್ಟು ಟ್ರಾಲಿಯಲ್ಲಿ ನದಿ ದಾಟುತ್ತಾರೆ ಜನ

ನಮ್ಮ ದೇಶವನ್ನು ಸದೃಢವಾಗಿ ಕಟ್ಟಬೇಕಿದೆ. ಪೊಲೀಸರು ದೈಹಿಕವಾಗಿ ಸದೃಢವಾಗಿರಬೇಕು. ಇದೇ ಇಂದಿನ ಹೋರಾಟದ ಹಿಂದಿನ ತತ್ವ ಸಿದ್ಧಾಂತ. ಈ ನಿಟ್ಟಿನಲ್ಲಿ ಮಾದಕವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...