ಪ್ರಸಿದ್ಧ ಯಾತ್ರಾಸ್ಥಳ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 34 ದಿನಗಳಲ್ಲಿ ಬರೋಬ್ಬರಿ 2.57 ಕೋಟಿ ರೂಪಾಯಿ ಸಂಗ್ರಹವಾಗಿದೆ.
ಇದರ ಜೊತೆಗೆ 127 ಗ್ರಾಂ ಚಿನ್ನ 3.4 ಕೆಜಿ ಬೆಳ್ಳಿ ಸಹ ಸಂಗ್ರಹವಾಗಿದ್ದು, ಶುಕ್ರವಾರದಂದು ಮಲೆಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿತ್ತು.
ಈ ಸಂದರ್ಭದಲ್ಲಿ ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಉಪಸ್ಥಿತರಿದ್ದರು.