
ಪ್ರಕರಣದ ವಿವರ: ಉತ್ತರಪ್ರದೇಶದ ಕನೋಜ್ ನಲ್ಲಿ ಈ ಘಟನೆ ನಡೆದಿದ್ದು, ಮನೆಯಿಂದ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯೊಬ್ಬಳು, ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ರಕ್ತದ ನಡುವಿನಲ್ಲಿ ಬಿದ್ದಿದ್ದ ಆಕೆ ಸಹಾಯಕ್ಕಾಗಿ ಯಾಚಿಸುತ್ತಿದ್ದರೂ ಸಹ ಯಾರೊಬ್ಬರ ಮನ ಕರಗಿಲ್ಲ.
ಬದಲಾಗಿ ಆಕೆಯ ವಿಡಿಯೋವನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದು, ಕಡೆ ಪಕ್ಷ ಪೊಲೀಸರಿಗೆ ವಿಷಯ ಮುಟ್ಟಿಸಲು ಸಹ ಯಾರೊಬ್ಬರೂ ಪ್ರಯತ್ನಿಸಿಲ್ಲ. ಕಡೆಗೆ ಮಾನವೀಯತೆಯುಳ್ಳ ವ್ಯಕ್ತಿಯೊಬ್ಬ ಪೊಲೀಸರಿಗೆ ವಿಷಯ ಮುಟ್ಟಿಸಿದ ವೇಳೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.