alex Certify ಮಾರುಕಟ್ಟೆಗೆ ಹೋಗಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರುಕಟ್ಟೆಗೆ ಹೋಗಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್

ಕೋಲ್ಕತ್ತಾ : ಮಾರುಕಟ್ಟೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

ಈ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಡೆದಿದೆ. ಪರಿಚಯಸ್ಥ ಆಟೋ ಚಾಲಕನಿಂದಲೇ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಸದ್ಯ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

BIG NEWS: ಅರಾಜಕತೆ ಸೃಷ್ಟಿಸಲೆಂದೇ ಇಂತಹ ಸಂಚು; ಮಹಾ ಸರ್ಕಾರದಲ್ಲಿ ಕಾಂಗ್ರೆಸ್ ಪಾಲುದಾರಿಕೆಯಿದೆ; ಸಿ.ಟಿ. ರವಿ ಆಕ್ರೋಶ

ಬಾಲಕಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಮಾರುಕಟ್ಟೆಗೆ ಬಿಡುತ್ತೇನೆಂದು ಆಟೋ ಚಾಲಕ ಹೇಳಿ ಆಟೋದಲ್ಲಿ ಹತ್ತಿಸಿಕೊಂಡಿದ್ದಾನೆ. ಆನಂತರ ದಾರಿ ಮಧ್ಯೆ ಮತ್ತೋರ್ವ ವ್ಯಕ್ತಿ ಆಟೋ ಹತ್ತಿದ್ದಾನೆ. ಮಾರುಕಟ್ಟೆಗೆ ತೆರಳುವ ಬದಲು, ನಿರ್ಜನ ಪ್ರದೇಶಕ್ಕೆ ಆಟೋ ಒಯ್ದು ಇಬ್ಬರು ಸೇರಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಅತ್ಯಾಚಾರ ನಡೆಸಿದ ನಂತರ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ಕುರಿತು ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ಪೊಲೀಸರು ಆಟೋ ಚಾಲಕನನ್ನು ಬಂಧಿಸಿ, ಮತ್ತೋರ್ವನಿಗೆ ಬಲೆ ಬೀಸಿದ್ದಾರೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...