alex Certify ಮಾರ್ಗಸೂಚಿಯಲ್ಲಿ ಟೈಪಿಂಗ್ ಮಿಸ್ಟೇಕ್; ನೈಟ್ ಕರ್ಫ್ಯೂ ಟೈಮಿಂಗ್ಸ್ ನಲ್ಲಿ ಗೊಂದಲ; ಸ್ಪಷ್ಟನೆ ನೀಡಿದ ಸಚಿವ ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರ್ಗಸೂಚಿಯಲ್ಲಿ ಟೈಪಿಂಗ್ ಮಿಸ್ಟೇಕ್; ನೈಟ್ ಕರ್ಫ್ಯೂ ಟೈಮಿಂಗ್ಸ್ ನಲ್ಲಿ ಗೊಂದಲ; ಸ್ಪಷ್ಟನೆ ನೀಡಿದ ಸಚಿವ ಸುಧಾಕರ್

ಬೆಂಗಳೂರು: ರಾಜ್ಯಾದ್ಯಂತ ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಕರ್ಫ್ಯೂ ಸಮಯದ ಬಗ್ಗೆ ಸಾಕಷ್ಟು ಗೊಂದಲಗಳು ಆರಂಭವಾಗಿತ್ತು. ಆದರೆ ಈ ಗೊಂದಲಗಳಿಗೆ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ತೆರೆ ಎಳೆದಿದ್ದಾರೆ.

ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಿರುವ ನೈಟ್ ಕರ್ಫ್ಯೂ ಜತೆಗೆ ಇಂದಿನಿಂದ ವೀಕೆಂಡ್ ಕರ್ಫ್ಯೂವನ್ನು ಕೂಡ ಜಾರಿಗೆ ತಂದಿದ್ದು, ರಾತ್ರಿ 8 ಗಂಟೆಯಿಂದಲೇ ಕರ್ಫ್ಯೂ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕರ್ಫ್ಯೂ ಸಮಯದಲ್ಲಿ ಕೊಂಚ ಬದಲಾವಣೆಯಾಗಿದ್ದು, ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಸರ್ಕಾರದ ಮಾರ್ಗಸೂಚಿಯಲ್ಲಿ ಟೈಪಿಂಗ್ ಮಿಸ್ಟೇಕ್ ನಿಂದಾಗಿ ಗೊಂದಲವಾಗಿದೆ. ಬೆಂಗಳೂರಿನಲ್ಲಿ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಿನ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಆಯಾ ಜಿಲ್ಲಾಧಿಕಾರಿಗಳು ಸಮಯ ನಿಗದಿ ಮಾಡಬಹುದು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...