ಕೆಲವು ತಿಂಗಳಿಂದ ರಾಜ್ಯದಲ್ಲಿ ಕಡಿಮೆಯಾಗಿದ್ದ ಕೊರೊನಾ ಸೋಂಕು ಈಗ ಮತ್ತೆ ಜಾಸ್ತಿಯಾಗುತ್ತಿದೆ. ಸೋಮವಾರ ಒಂದೇ ದಿನ ರಾಜ್ಯದ 617 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆದರೆ ಯಾವುದೇ ಸಾವು – ನೋವು ವರದಿಯಾಗಿಲ್ಲ.
ಸೋಂಕು ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಸಂಪೂರ್ಣವಾಗಿ ಮರೆತೇಬಿಟ್ಟಿದ್ದಾರೆ. ಕೊರೊನಾ ಸೋಂಕು ಸಂಪೂರ್ಣವಾಗಿ ತೊಲಗಿಲ್ಲ ಹೀಗಾಗಿ ನಿರ್ಲಕ್ಷ ಬೇಡ ಎಂದು ತಜ್ಞರು ಹೇಳುತ್ತಿದ್ದರೂ ಕಿವಿಗೊಡುತ್ತಿಲ್ಲ.
ಇದೀಗ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದಿದ್ದರೆ ಅಂತವರಿಗೆ ದಂಡ ವಿಧಿಸಲು ತಾಂತ್ರಿಕ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, ಸರ್ಕಾರ ಈ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.