alex Certify ಮಾ. 14 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ದಾಖಲೆಯ 16ನೇ ಬಾರಿಗೆ ಸಿಎಂ ಆಯವ್ಯಯ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 14 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ದಾಖಲೆಯ 16ನೇ ಬಾರಿಗೆ ಸಿಎಂ ಆಯವ್ಯಯ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4 ದಿನಗಳ ಕಾಲ ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲು ಉದ್ದೇಶಿಸಲಾಗಿದೆ. ಮಾರ್ಚ್ 14 ರಂದು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಈ ಹಿಂದೆ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ್ದು ದಾಖಲೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಮುಂದುವರೆಸಲಿದ್ದಾರೆ. 2025 -26 ನೇ ಸಾಲಿನ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ದಾಟುವ ಅಂದಾಜಿದೆ.

ಬಜೆಟ್ ಗೆ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳು, ಸಂಘ ಸಂಸ್ಥೆ, ಸಂಘಟನೆಗಳ ಜೊತೆಗೆ ಸಭೆ ನಡೆಸಲಿರುವ ಸಿಎಂ ಅಭಿಪ್ರಾಯ ಪಡೆಯಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...