ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಕೂಗು ಕೆಲ ಸಮುದಾಯಗಳಿಂದ ಕೇಳಿ ಬಂದಿದ್ದು, ಅಂಥವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.
ಸೆಪ್ಟೆಂಬರ್ 23 ರಂದು ಬಿಜೆಪಿ ರಾಜ್ಯ ಘಟಕದಿಂದ ಬಳ್ಳಾರಿಯಲ್ಲಿ ಎಸ್ ಟಿ ಮೋರ್ಚಾ ಸಮಾವೇಶ ನಡೆಯಲಿದ್ದು, ಈ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಸಾರಿಗೆ ಸಚಿವ ಬಿ. ಶ್ರೀರಾಮುಲು ಭಾನುವಾರದಂದು ಈ ವಿಷಯ ತಿಳಿಸಿದ್ದು, ಅಂದು ನಡೆಯುವ ಸಮಾವೇಶದಲ್ಲಿ ಸರ್ಕಾರದಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ ಎಂದಿದ್ದಾರೆ.