ಬೆಂಗಳೂರು : ರಾಜ್ಯದಲ್ಲಿ ಮೂರನೇ ಅಲೆ ಹೆಚ್ಚಿನ ತೊಂದರೆ ಸೃಷ್ಟಿಸಿಲ್ಲ ಎಂಬ ಕಾರಣಕ್ಕೆ ಸರ್ಕಾರವು, ಕೋವಿಡ್ ನ ಹಲವು ನಿಯಮಗಳಲ್ಲಿ ಸಡಿಲಿಕೆ ಮಾಡಿತ್ತು. ಶಾಲಾ – ಕಾಲೇಜುಗಳನ್ನು ತೆರೆದು, ವೀಕೆಂಡ್ ಕರ್ಫ್ಯೂವನ್ನು ಹಿಂಪಡೆದಿತ್ತು. ಆದರೆ, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಆತಂಕ ಹೆಚ್ಚಾಗುತ್ತಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರೊಂದಿಗೆ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಹೀಗಾಗಿ ಕೋವಿಡ್ ನಿಯಮಗಳನ್ನು ಸಡಿಲಿಕೆ ಮಾಡಬಾರದು ಎಂದು ತಜ್ಞರು, ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಉಸಿರಾಟದ ತೊಂದರೆ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿರುವವರು ಹೆಚ್ಚು ಅಪಾಯ ಎದುರಿಸುತ್ತಿದ್ದಾರೆ. ಬಿಪಿ, ಲಂಗ್ ಡಿಸೀಸ್ ಹಾಗೂ ಸಕ್ಕರೆ ಕಾಯಿಲೆ ಇದ್ದವರು ಹೆಚ್ಚಾಗಿ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಮುಂದಿನ ಕೆಲವು ದಿನಗಳವರೆಗೆ ಕಠಿಣ ನಿಯಮವೇ ಜಾರಿಯಲ್ಲಿರಬೇಕು ಎಂದು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.
ರಾಜ್ಯದಲ್ಲಿ ಕಳೆದ 10 ದಿನಗಳಿಂದ ಈಚೆಗೆ ಕೋವಿಡ್ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜ. 16ರಂದು ಮಹಾಮಾರಿಗೆ 13 ಜನ ಬಲಿಯಾಗಿದ್ದರು. ಜ. 26ಕ್ಕೆ 39 ಜನ ಬಲಿಯಾಗಿದ್ದರೆ, ಜ. 25ರಂದು 52 ಜನ ಸಾವನ್ನಪ್ಪಿದ್ದರು. ಇನ್ನುಳಿದಂತೆ ಪ್ರತಿ ದಿನವು ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದರಿಂದಾಗಿ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ತಜ್ಞರು ಕಠಿಣ ನಿಯಮ ಸಡಿಲಿಕೆಗೆ ಸರ್ಕಾರ ಮುಂದಾಗಬಾರದು ಎಂದು ಎಚ್ಚರಿಕೆ ನೀಡಿದೆ.