ಸತತ ಎರಡನೇ ಬಾರಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯ ಗಳಿಸಿ ಅಧಿಕಾರದ ಗದ್ದುಗೆಗೇರಿರುವ ಆಮ್ ಆದ್ಮಿ ಪಕ್ಷ, ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲೂ ಯಶಸ್ವಿಯಾಗಿದೆ. ಇದೀಗ ಗುಜರಾತ್ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ, ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಕಮಾಲ್ ಮಾಡಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಇದಕ್ಕೆ ವೇದಿಕೆ ರೂಪಿಸಲು ಎಂಬಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜ್ಯಕ್ಕೆ ಬಂದಿಳಿದಿದ್ದು, ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ 50ಸಾವಿರಕ್ಕೂ ಅಧಿಕ ರೈತರು ಹಾಗೂ ಜನಸಾಮಾನ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.
BIG BREAKING: 24 ಗಂಟೆಯಲ್ಲಿ ಮತ್ತೆ 2,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ
ಆಮ್ ಆದ್ಮಿ ಪಕ್ಷದತ್ತ ನಗರ ಪ್ರದೇಶಗಳ ಜನತೆಯ ಒಲವು ವ್ಯಕ್ತವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲೂ ಬೇರು ಬಿಡಲು ಈ ಸಮಾವೇಶದ ಮೂಲಕ ಪ್ರಯತ್ನ ನಡೆಸಲಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಇಂದಿನ ಸಮಾವೇಶದ ಮುಂಚೂಣಿಯಲ್ಲಿರುವುದು ಗಮನಾರ್ಹ ಸಂಗತಿ. ಇತ್ತೀಚೆಗಷ್ಟೇ ಹಿರಿಯ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡಿದ್ದು, ಇನ್ನಷ್ಟು ಪ್ರಮುಖರು ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಇಂದು ಪಕ್ಷ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮನೆಮಾಡಿದೆ.