
ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ ತಂಡದ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್ ಅವರನ್ನು ಮುಂಬೈ ಇಂಡಿಯನ್ಸ್ 8 ಕೋಟಿಗೆ ಖರೀದಿ ಮಾಡಿದೆ.
ರಾಜಸ್ಥಾನ್ ರಾಯಲ್ಸ್ ಪರ ಭರ್ಜರಿ ಬೌಲಿಂಗ್ ಪ್ರದರ್ಶನ ತೋರಿದ್ದ ಈ ಆಟಗಾರ ಇದೀಗ ಮುಂಬೈ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ರೋಹಿತ್ ಶರ್ಮ, ಕೈರಾನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್ ಜಸ್ ಪ್ರೀತ್ ಬುಮ್ರಾರನ್ನು ಉಳಿಸಿಕೊಂಡಿದ್ದರೂ ಮುಂಬೈ ಇಂಡಿಯನ್ಸ್ ತಂಡ, ಕೈಬಿಟ್ಟಿದ್ದ ಇಶಾನ್ ಕಿಶನ್ ರನ್ನು ನಿನ್ನೆ 15.25 ಕೋಟಿಗೆ ಖರೀದಿ ಮಾಡಿದೆ.
ಮುಂಬೈ ಇಂಡಿಯನ್ಸ್ ಕೈಬಿಟ್ಟಿದ್ದ ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ ಹಾಗೂ ರಾಹುಲ್ ಚಾಹರ್ ಹಾಗೂ ಕ್ವಿಂಟನ್ ಡಿಕಾಕ್ ಈಗಾಗಲೇ ಬೇರೆ ಬೇರೆ ತಂಡಗಳಿಗೆ ಖರೀದಿಯಾಗಿದ್ದಾರೆ. ಬಲಿಷ್ಠ ಆಟಗಾರರನ್ನು ಖರೀದಿ ಮಾಡಲು ಮುಂಬೈ ಇಂಡಿಯನ್ಸ್ ಸಜ್ಜಾಗಿದೆ
