alex Certify ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಹಾಕಿದ್ದವನು ‘ಅಂದರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಹಾಕಿದ್ದವನು ‘ಅಂದರ್’

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು 56 ವರ್ಷದ ವಿಷ್ಣು ಭೌಮಿಕ್ ಎಂದು ಗುರುತಿಸಲಾಗಿದ್ದು, ಈತ ಸೋಮವಾರ ಬೆಳಗ್ಗೆ ಗಿರ್ಗಾಂವ್ ನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ಲೈನ್ ಗೆ ಕರೆ ಮಾಡಿ ಮುಕೇಶ್ ಅಂಬಾನಿ ಮತ್ತವರ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ವಿಷ್ಣು ಭೌಮಿಕ್ ನನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಈತನ ಮಾನಸಿಕ ಸ್ಥಿತಿ ಸರಿಯಿಲ್ಲವೆಂದು ಕಾಣುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...