ನೇರಳೆ ಹಣ್ಣು ತಿನ್ನಲು ಬಲು ರುಚಿ. ಅಷ್ಟೇ ಅಲ್ಲದೇ ಇದನ್ನು ತಿನ್ನುವುದರಿಂದ ಆರೋಗ್ಯ ಹಾಗೂ ಸೌಂದರ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಚರ್ಮದ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು.
* ಮೊಡವೆಗಳ ಸಮಸ್ಯೆಗೆ ಒಣಗಿಸಿದ ನೇರಳೆ ಬೀಜವನ್ನು ರುಬ್ಬಿ ಪುಡಿ ಮಾಡಿಕೊಂಡು ಹಸುವಿನ ಹಾಲನ್ನು ಹಾಕಿ ಮಿಕ್ಸ್ ಮಾಡಿ ರಾತ್ರಿ ಮಲಗುವ ಮುನ್ನ ಮೊಡವೆಗಳಿಗೆ ಹಚ್ಚಿ ಬೆಳಗ್ಗೆ ತೊಳೆಯಬೇಕು. ಹೀಗೆ ಪ್ರತಿದಿನ ಮಾಡಿದರೆ ಮೊಡವೆಗಳು ಮಾಯವಾಗುತ್ತದೆ.
* ತ್ವಚೆಯ ಹೊಳಪಿಗೆ ನೇರಳೆ ಹಣ್ಣಿನ ಬೀಜದ ಪುಡಿ ಮತ್ತು ಕಿತ್ತಳೆ ಹಣ್ಣಿನ ಸಿಪ್ಪೆಯ ಪುಡಿಗೆ, ಎರಡು ಹನಿ ಬಾದಾಮಿ ಎಣ್ಣೆ ಮತ್ತು ರೋಸ್ ವಾಟರ್ ನ್ನು ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಫೇಸ್ ಪ್ಯಾಕ್ ಹಾಕಿಕೊಂಡು 15 ನಿಮಿಷಗಳ ನಂತರ ತೊಳೆಯಬೇಕು. ಈ ರೀತಿ ಮೂರ್ನಾಲ್ಕು ದಿನಗಳಿಗೆ ಒಮ್ಮೆ ಮಾಡಿದರೆ ಒಳ್ಳೆಯ ಫಲಿತಾಂಶ ನಿಮ್ಮದಾಗುತ್ತದೆ.
* ಮುಖದ ಮೇಲೆ ಕಪ್ಪು ಕಲೆ ನಿವಾರಣೆಯಾಗಲು ನೇರಳೆ ಬೀಜದ ಪುಡಿಗೆ ಕಡಲೇ ಹಿಟ್ಟು, ಕೆಲ ಬಾದಾಮಿ ಎಣ್ಣೆಯ ಹನಿಗಳು ಮತ್ತು ರೋಸ್ ವಾಟರ್ ನ್ನು ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ, ಒಣಗಲು ಬಿಡಿ. ಸಂಪೂರ್ಣ ಒಣಗಿದ ನಂತರ ತಣ್ಣೀರಿನಿಂದ ತೊಳೆಯಬೇಕು. ಈ ರೀತಿ ತಿಂಗಳಿಗೆ ಒಮ್ಮೆ ಮಾಡಿದರೂ ಒಳ್ಳೆ ಫಲಿತಾಂಶ ಪಡೆಯಬಹುದು.