ನೆಲ್ಲಿಕಾಯಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಹಲವು ರೋಗಗಳಿಗೆ ಔಷಧವಾಗಿ ಬಳಸುತ್ತಾರೆ. ಇದರಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಮುಖದ ಹೊಳಪು ಹೆಚ್ಚಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸಿ ಚರ್ಮ ಹಾಳು ಮಾಡಿಕೊಳ್ಳುವ ಬದಲು ನೆಲ್ಲಿಕಾಯಿಯ ಈ ಫೇಸ್ ಪ್ಯಾಕ್ ಬಳಸಿ.
*2 ಚಮಚ ನೆಲ್ಲಿಕಾಯಿ ಪುಡಿಗೆ ಜೇನುತುಪ್ಪ ಮಿಕ್ಸ್ ಮಾಡಿ , ಅದಕ್ಕೆ ಸ್ವಲ್ಪ ಮೊಸರು ಮಿಕ್ಸ್ ಮಾಡಿ. ಅದನ್ನು ಮುಖಕ್ಕೆ ಹಚ್ಚಿ. 20 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಇದರಿಂದ ನಿಮ್ಮ ಚರ್ಮದಲ್ಲಿ ತಾಜಾತನ ಮತ್ತು ಚೈತನ್ಯ ಕಂಡುಬರುತ್ತದೆ. ಇದು ಒಣ ಚರ್ಮದವರಿಗೆ ಹೆಚ್ಚು ಉಪಯುಕ್ತವಾಗಿದೆ.
* ಕಲೆಗಳನ್ನು ನಿವಾರಿಸಲು 2 ಚಮಚ ಕಡಲೆ ಹಿಟ್ಟಿಗೆ, 1 ಚಮಚ ನೆಲ್ಲಿಕಾಯಿ ಪುಡಿ ಮತ್ತು ರೋಸ್ ವಾಟರ್ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ. 20 ನಿಮಿಷಗಳ ಕಾಲ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡಿ.