alex Certify ಮುಟ್ಟಿನ ಸಮಯದಲ್ಲಿನ ರಕ್ತಸ್ರಾವಕ್ಕೆ ‘ಆಡುಸೋಗೆ’ಯಲ್ಲಿದೆ ಮದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದಲ್ಲಿನ ರಕ್ತಸ್ರಾವಕ್ಕೆ ‘ಆಡುಸೋಗೆ’ಯಲ್ಲಿದೆ ಮದ್ದು

ಆಡುಸೋಗೆ ಔಷಧೀಯ ಗುಣಗಳನ್ನು ಮೈತುಂಬಿಕೊಂಡಿರುವ ಸಸ್ಯ. ಉಷ್ಣ ಗುಣವನ್ನು ಹೊಂದಿದ ಈ ಸಸ್ಯ ನೆಗಡಿ, ಕೆಮ್ಮು ಮುಂತಾದ ಸಾಮಾನ್ಯ ಕಾಯಿಲೆಗಳಿಗೆ ರಾಮಬಾಣ.

ಆಡುಸೋಗೆ ಸ್ವಲ್ಪ ಕಹಿಯಾದರೂ ಅಪಾರವಾದ ಔಷಧೀಯ ಖಜಾನೆಯನ್ನೇ ಹೊಂದಿದೆ. ಈ ಸೊಪ್ಪಿನ ಇನ್ನಷ್ಟು ಪ್ರಯೋಜನಗಳನ್ನು ತಿಳಿಯೋಣ.

* ಆಡುಸೋಗೆ ಎಲೆಗಳನ್ನು ನೀರಲ್ಲಿ ಕುದಿಸಿ ಕಷಾಯ ಮಾಡಿ ದಿನಕ್ಕೆ 2 ಬಾರಿ ಸೇವಿಸಿದರೆ ಗಂಟಲು ಉರಿ, ಕೆಮ್ಮು ಮತ್ತು ಹಳದಿ ಅಥವಾ ಹಸಿರು ಕಫ ಇದ್ದರೆ ಬೇಗ ಶಮನವಾಗುತ್ತದೆ.

* ಮೊಣಕಾಲು, ಮಂಡಿಗಳಲ್ಲಿ ಊತ, ನೋವು ಮತ್ತು ಕೆಂಪಾಗಿದ್ದರೆ ಆಡುಸೋಗೆ ಎಲೆಯನ್ನು ಎಳ್ಳೆಣ್ಣೆಯಲ್ಲಿ ಬೇಯಿಸಿ ಬಟ್ಟೆಯಲ್ಲಿಟ್ಟು ಕಟ್ಟಿದರೆ ಊತ, ನೋವು ಬೇಗ ಕಡಿಮೆಯಾಗುತ್ತದೆ.

* ಅಸ್ತಮಾ ಇದ್ದರೆ ಆಡುಸೋಗೆ ಎಲೆಯ ರಸಕ್ಕೆ ಶುಂಠಿ ರಸ ಮತ್ತು ಜೇನುತುಪ್ಪ ಸೇರಿಸಿ ದಿನಕ್ಕೆ 2 ರಿಂದ 4 ಬಾರಿ ಸೇವಿಸಿದರೆ ಆಸ್ತಮಾ ನಿವಾರಣೆಯಾಗುತ್ತದೆ.

* ಅಂಗೈ ಮತ್ತು ಅಂಗಾಲಿನಲ್ಲಿ ಉರಿ ಹೆಚ್ಚಿದ್ದರೆ, ಆಡುಸೋಗೆ ಎಲೆಯ ಕಷಾಯ ಮಾಡಿ ಅದರಲ್ಲಿ ಅಂಗೈ ಮತ್ತು ಅಂಗಾಲನ್ನು 10 ರಿಂದ 15 ನಿಮಿಷ ಇಟ್ಟರೆ ಉರಿ ಬೇಗ ಶಮನವಾಗುತ್ತದೆ.

* ಹೊಟ್ಟೆಯಲ್ಲಿ ಹುಣ್ಣಾಗಿದ್ದು ಉರಿ, ನೋವಿದ್ದರೆ ಆಡುಸೋಗೆ ಎಲೆಯ ಪುಡಿಗೆ ಜೇಷ್ಠಮಧು ಪುಡಿ ಮತ್ತು ಕಲ್ಲುಸಕ್ಕರೆ ಪುಡಿ ಸೇರಿಸಿ ಸೇವಿಸಿದರೆ ಹೊಟ್ಟೆ ಹುಣ್ಣು ಗುಣವಾಗುತ್ತದೆ.

* ಆಡುಸೋಗೆ ಎಲೆಯ ರಸ, ಒಣದ್ರಾಕ್ಷಿ ಮತ್ತು ಅಳಲೆಕಾಯಿ ಹಣ್ಣಿನ ತಿರುಳನ್ನು ನೀರಿಗೆ ಹಾಕಿ ಕಷಾಯ ತಯಾರಿಸಿ ದಿನಕ್ಕೆ 2 ಬಾರಿ ಕುಡಿದರೆ ಮೂಗಿನಲ್ಲಿ ರಕ್ತ ಸೋರುವುದು ನಿಲ್ಲುತ್ತದೆ.

* ವಸಡುಗಳಲ್ಲಿ ರಕ್ತಸ್ರಾವ ಆಗುತ್ತಿದ್ದರೆ, ಆಡುಸೋಗೆ ಎಲೆಗಳನ್ನು ಪೇಸ್ಟ್‌ ಮಾಡಿ ವಸಡುಗಳಿಗೆ ಲೇಪ ಮಾಡಿದರೆ ರಕ್ತ ನಿಲ್ಲುತ್ತದೆ.

* ಮೂತ್ರದಲ್ಲಿ ರಕ್ತ ಹೋಗುತ್ತಿದ್ದರೆ, ಆಡುಸೋಗೆ ಬೇರಿನ ಕಷಾಯವನ್ನು ಸೇವಿಸಿದರೆ ಪ್ರಯೋಜನವಿದೆ.

* ಋತುಸ್ರಾವ ಸಮಯದಲ್ಲಿ ಅಧಿಕ ರಕ್ತಸ್ರಾವ ಆಗುತ್ತಿದ್ದರೆ, ಆಡುಸೋಗೆ ಎಲೆ ಪುಡಿಗೆ ಅದರದೇ ಕಷಾಯ ಮತ್ತು ಕಲ್ಲುಸಕ್ಕರೆ ಬೆರೆಸಿ ಸೇವಿಸಿದರೆ ರಕ್ತಸ್ರಾವ ನಿಲ್ಲುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...