ಬಾಗಲಕೋಟೆ: ನಮ್ಮ ನಾಯಕ ಮುರುಗೇಶ್ ನಿರಾಣಿ ಶೀಘ್ರದಲ್ಲಿ ಸಿಎಂ ಆಗ್ತಾರೆ. ಯಾವ ಸಂದರ್ಭದಲ್ಲಿ ಆಗ್ತಾರೆ ಎಂದು ನನಗೆ ಗೊತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಸಮಾರಂಭವೊಂದಲ್ಲಿ ಮಾತನಾಡಿದ ಈಶ್ವರಪ್ಪ, ನಮ್ಮ ನಾಯಕ ನಿರಾಣಿಯವರು ಆದಷ್ಟು ಬೇಗ ಸಿಎಂ ಆಗ್ತಾರೆ. ಆದರೆ ಯಾವ ಸಂದರ್ಭದಲ್ಲಿ ಎಂಬುದು ನನಗೆ ಗೊತ್ತಿಲ್ಲ. ನಾಳೇನೆ ಆಗ್ತಾರಾ?, ಬೊಮ್ಮಾಯಿಯನ್ನು ಕೆಳಗಿಳಿಸ್ತಾರಾ? ನಿರಾಣಿಗೆ ಸಿಎಂ ಆಗುವ ಶಕ್ತಿ ಇದೆ, ಇವತ್ತಲ್ಲ ನಾಳೆ ಆಗ್ತಾರೆ ಎಂದರು.
ಇಡೀ ರಾಜ್ಯದ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವಂಥ ಸಿಎಂ ಆಗಬೇಕು. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡ್ತಿಯೇನಪ್ಪಾ? ಎಂದು ಈಶ್ವರಪ್ಪ ಮುರುಗೇಶ್ ನಿರಾಣಿಯವರನ್ನು ವೇದಿಕೆ ಮೇಲೆ ಪ್ರಶ್ನಿಸಿದ್ದಾರೆ. ಇದಕ್ಕೆ ಸಚಿವ ನಿರಾಣಿ ಕೂಡ ಓಕೆ ಎಂದ ಪ್ರಸಂಗ ನಡೆದಿದೆ.
ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರಿಗೂ ಸಿಎಂ ಸ್ಥಾನದ ಮೇಲೆ ಕಣ್ಣಿದೆ. ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿ ಇದೆ. ಈಗಿನಿಂದಲೇ ದಿನದ 24 ಗಂಟೆಯೂ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ತಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.