alex Certify ಮುರುಘಾ ಶರಣರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ನ್ಯಾಯಾಲಯದ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶರಣರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ನ್ಯಾಯಾಲಯದ ಅನುಮತಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಚಿಕಿತ್ಸೆಗೆ ಕೋರ್ಟ್ ಅನುಮತಿ ನೀಡಿದೆ.

ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಅನುಮತಿಸಿದೆ.

ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ ಮರಕಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ನ್ಯಾಯಾಧೀಶೆ ಬಿ.ಕೆ. ಕೋಮಲ ಅವರು ಅನುಮತಿ ನೀಡಿದ್ದು, ಶ್ರೀಗಳನ್ನು ಇಂದು ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...