
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಗುರುತರ ಆರೋಪಕ್ಕೆ ಗುರಿಯಾಗಿದ್ದರೂ ಸಹ ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ಏಕಾಂತಯ್ಯನವರ ನೇತೃತ್ವದಲ್ಲಿ ಚಿತ್ರದುರ್ಗದ ನಿಜಲಿಂಗಪ್ಪ ಸಭಾಭವನದಲ್ಲಿ ಶ್ರೀಮಠದ ಭಕ್ತರ ಮಹತ್ವದ ಸಭೆ ನಡೆಯಲಿದೆ.
ಈ ಸಂದರ್ಭದಲ್ಲಿ ಮಠದ ಪರಂಪರೆ, ಇತಿಹಾಸ ಕುರಿತ ಚರ್ಚೆ ನಡೆಯಲಿದ್ದು, ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಸಲುವಾಗಿ ಶಿವಮೂರ್ತಿ ಶರಣರು ಪೀಠ ತ್ಯಾಗ ಮಾಡುವಂತೆ ತಿಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.