ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಈ ಕೃತ್ಯಕ್ಕೆ ಸಹಕರಿಸಿದವರನ್ನೂ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಇದರ ಮಧ್ಯೆ ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಹಿರಂಗಗೊಳಿಸಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕ ಎಂ.ಎಲ್. ಪರಶುರಾಂ ಸ್ಪೋಟಕ ಮಾಹಿತಿಯೊಂದನ್ನು ಹೇಳಿದ್ದು, ಪ್ರಕರಣದಿಂದ ಹಿಂದೆ ಸರಿಯುವಂತೆ ನಮಗೆ ಮೂರು ಕೋಟಿ ರೂಪಾಯಿಗಳ ಆಮಿಷ ಒಡ್ಡಲಾಗಿತ್ತು ಎಂದು ಹೇಳಿದ್ದಾರೆ.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರದಂದು ಏರ್ಪಡಿಸಲಾಗಿದ್ದ ‘ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ’ ಕಾರ್ಯಕ್ರಮದಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಅವರು, ಜೊತೆಗೆ ಸಚಿವರೊಬ್ಬರು ಸ್ವಾಮೀಜಿಯವರನ್ನು ಬಿಟ್ಟುಬಿಡಿ ಎಂದು ನಮಗೆ ಹೇಳಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ.