alex Certify ಮೂತ್ರಪಿಂಡ ಆರೋಗ್ಯದಿಂದಿರಲು ಫಾಲೋ ಮಾಡಿ ಈ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂತ್ರಪಿಂಡ ಆರೋಗ್ಯದಿಂದಿರಲು ಫಾಲೋ ಮಾಡಿ ಈ ಟಿಪ್ಸ್

ಮೂತ್ರಪಿಂಡ ದೇಹದ ಪ್ರಮುಖ ಭಾಗವಾಗಿದೆ. ಇದು ನಮ್ಮ ಆರೋಗ್ಯವನ್ನು ಕಾಪಾಡಲು ಅತಿ ಅವಶ್ಯಕ. ಒಂದು ವೇಳೆ ಮೂತ್ರಪಿಂಡ ಸಮಸ್ಯೆಗೆ ಒಳಗಾದರೆ ವ್ಯಕ್ತಿ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಬಹುದು. ಹಾಗಾಗಿ ಮೂತ್ರಪಿಂಡವನ್ನು ಆರೋಗ್ಯವಾಗಿಡುವುದು ಒಳ್ಳೆಯದು. ಅದಕ್ಕಾಗಿ ಈ ಟಿಪ್ಸ್ ಫಾಲೋ ಮಾಡಿ.

-ದೇಹವನ್ನು ಹೈಡ್ರೀಕರಿಸಿ. ಮೂತ್ರ ಹಳದಿ ಬಣ್ಣಕ್ಕೆ ತಿರುಗಲು ಬಿಡಬೇಡಿ. ಇದರಿಂದ ಮೂತ್ರಪಿಂಡಕ್ಕೆ ಸಮಸ್ಯೆಯಾಗುತ್ತದೆ. ಅದಕ್ಕಾಗಿ ಪ್ರತಿದಿನ ಸರಿಯಾಗಿ ನೀರನ್ನು ಕುಡಿಯಿರಿ.

-ಆರೋಗ್ಯಕರವಾದ ಆಹಾರವನ್ನು ಸೇವಿಸಿ. ಅತಿ ಹೆಚ್ಚು ಉಪ್ಪಿರುವ ಹಾಗೂ ಕೊಬ್ಬಿನ ಆಹಾರವನ್ನು ಸೇವಿಸಬೇಡಿ. ದೇಹದ ತೂಕವನ್ನು ಕಾಪಾಡಿಕೊಳ್ಳಿ. ಮಧುಮೇಹ ಸಮಸ್ಯೆ ಬರದಂತೆ ಎಚ್ಚರ ವಹಿಸಿ.

-ರಕ್ತದೊತ್ತಡವನ್ನು ನಿಯಂತ್ರಿಸಿ. ಅಧಿಕ ರಕ್ತದೊತ್ತಡದಿಂದ ಹೃದಯಯಾಘಾತ, ಪಾರ್ಶ್ವವಾಯು, ಮೂತ್ರಪಿಂಡದ ಕಾಯಿಲೆಗೆ ಕಾರಣವಾಗಬಹುದು.

-ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಿಂದ ದೂರವಿರಿ. ಇದು ರಕ್ತದ ಹರಿವನ್ನು ನಿಧಾನಗೊಳಿಸಿ ಮೂತ್ರಪಿಂಡದ ಮೇಲೆ ಪರಿಣಾಮ ಬೀರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...