ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಸಾವು ಯಾವ ಕ್ಷಣದಲ್ಲಿ ಹಾಗೂ ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಉದಾಹರಣೆಯಂತಿದೆ ಈ ಪ್ರಕರಣ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೊಳಸೂರು ಗ್ರಾಮದ ಸಮೀಪ ಈ ಘಟನೆ ನಡೆದಿದ್ದು, ಅನಂತಪುರ ನಿವಾಸಿ ರಮೇಶ ಬಾಳಸಾಹೇಬ ಪಾಟೀಲ ಎಂಬವರು ಬೈಕಿನಲ್ಲಿ ಬರುತ್ತಿದ್ದರು.
ಈ ವೇಳೆ ಅವರು ಮೂತ್ರ ವಿಸರ್ಜನೆಗಾಗಿ ರಸ್ತೆ ಬದಿಗೆ ಬೈಕ್ ನಿಲ್ಲಿಸಿ ಇನ್ನೊಂದು ಬದಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದಾರೆ. ಬಳಿಕ ಅವರು ರಸ್ತೆ ದಾಟಿ ವಾಪಸ್ ಬರುವಾಗ ಅತಿ ವೇಗವಾಗಿ ಬಂದ ಕ್ರೂಸರ್ ಡಿಕ್ಕಿ ಹೊಡೆದಿದ್ದು ಇದರ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.