alex Certify ಮೂರು ವರ್ಷದಿಂದ ಮಲಗಿದ್ದವರೆಲ್ಲ ಎದ್ದು ರಾಜಕೀಯ ಮಾಡುತ್ತಿದ್ದಾರೆ; ಡಿ.ಕೆ.ಸಹೋದರರಿಗೆ ಟಾಂಗ್ ನೀಡಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ವರ್ಷದಿಂದ ಮಲಗಿದ್ದವರೆಲ್ಲ ಎದ್ದು ರಾಜಕೀಯ ಮಾಡುತ್ತಿದ್ದಾರೆ; ಡಿ.ಕೆ.ಸಹೋದರರಿಗೆ ಟಾಂಗ್ ನೀಡಿದ HDK

ರಾಮನಗರ: ಕಳೆದ ಮೂರು ವರ್ಷಗಳಿಂದ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೇಕೆದಾಟು ಪಾದಯಾತ್ರೆ ಬಳಿಕ ಜೆಡಿಎಸ್ ಭದ್ರಕೋಟೆ ಛಿದ್ರವಾಗುತ್ತೆ ಎಂದು ಅವರು ಹಗಲುಗನಸು ಕಾಣುತ್ತಿದ್ದಾರೆ. ಇಲ್ಲಿಂದಲೇ ಮತ್ತೆ ಪಾದಯಾತ್ರೆ ಮಾಡುತ್ತೇನೆ ಎಂದಿದ್ದಾರೆ. ಒಂದಲ್ಲ ಹತ್ತು ಪಾದಯಾತ್ರೆ ಮಾಡಿದರೂ ಏನೂ ಮಾಡಲು ಆಗಲ್ಲ ಎಂದು ಗುಡುಗಿದರು.

ಹಣ, ದಬ್ಬಾಳಿಕೆ ಮೂಲಕ ಕುಮಾರಸ್ವಾಮಿಯನ್ನು ಬಗ್ಗುಬಡಿಯಲು ಇನ್ನೂ ಹತ್ತು ಜನ್ಮ ಎತ್ತಿಬರಬೇಕು. ಈ ಜಿಲ್ಲೆಯ ಜನರಿಗೂ ದೇವೇಗೌಡರ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ಕುಮಾರಸ್ವಾಮಿಯನ್ನು ರಾಮನಗರದಿಂದ ಖಾಲಿ ಮಾಡಿಸುತ್ತಾರಂತೆ ಅದು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆಯುವ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಇಬ್ರಾಹಿಂ, ದೇವೇಗೌಡರ ಗರಡಿಯಲ್ಲಿ ಬೆಳೆದವರು. ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ ಎಂದು ಅವರೇ ಹೇಳಿದ್ದಾರೆ. ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಜೆಡಿಎಸ್ ಸೇರುತ್ತೇನೆ ಎಂದು ಅವರೇ ಹೇಳಿದ್ದಾರೆ. ಇಬ್ರಾಹಿಂ ಗೆ ಜೆಡಿಎಸ್ ಬರಲು ನಾನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...