alex Certify ‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ 20 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ 20 ವರ್ಷ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ನಟಿಸಿದ ಮೊಟ್ಟ ಮೊದಲ ಸಿನಿಮಾ ʼಮೆಜೆಸ್ಟಿಕ್ʼ ತೆರೆಮೇಲೆ ಬಂದು ಇಂದಿಗೆ 20 ವರ್ಷ ಗಳಾಗಿವೆ. ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ದರ್ಶನ್ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಚಿತ್ರ ಮೆಜೆಸ್ಟಿಕ್, ಪಿ.ಎನ್. ಸತ್ಯ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಹೊಸ ದಾಖಲೆ ಬರೆಯಿತು. ಉಲ್ಲಾಸ್ ಎಂಟರ್ ಟೈನ್ ಮೆಂಟ್ ಬ್ಯಾನರ್ ನಡಿ ಹರೀಶ್ ಹಾಗೂ ರಾಮಮೂರ್ತಿ ನಿರ್ಮಾಣ ಮಾಡಿದ್ದರು.

2002 ಫೆಬ್ರವರಿ 8ರಲ್ಲಿ ರಿಲೀಸ್ ಆದ ಈ ಚಿತ್ರ ಇಂದಿಗೆ 20 ವರ್ಷಗಳನ್ನು ಪೂರೈಸಿದ್ದು, ಈ ಸಂತಸವನ್ನು ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ದರ್ಶನ್ ಗೆ ಜೋಡಿಯಾಗಿ ರೇಖಾ ಅಭಿನಯಿಸಿದ್ದರು. ಜೈಜಗದೀಶ್, ವನಿತಾ ವಾಸು, ಹರೀಶ್ ರಾಯ್, ಬುಲೆಟ್ ಪ್ರಕಾಶ್, ಬ್ಯಾಂಕ್ ಜನಾರ್ಧನ್, ರಮೇಶ್ ಪಂಡಿತ್, ಸಾಯಿಪ್ರಕಾಶ್, ಜ್ಯೋತಿ ಗುರುಚರಣ್, ನಂದೀಶ್ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದರು.

BIG BREAKING: ಶಿವಮೊಗ್ಗದಲ್ಲಿ ತಾರಕಕ್ಕೇರಿದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಕಾಲೇಜು ಧ್ವಜಸ್ತಂಭದಲ್ಲಿ ಹಾರಿದ ಕೇಸರಿ ಬಾವುಟ; ಕಲ್ಲು ತೂರಾಟ

ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ಸಂತಸವನ್ನು ಹಂಚಿಕೊಂಡಿದ್ದು ಕೆಲಸಾಲುಗಳನ್ನು ಬರೆದುಕೊಂಡಿದ್ದಾರೆ. ನಿಮ್ಮೆಲ್ಲರ ಮನದಂಗಳಕ್ಕೆ ದಾಸನಾಗಿ ಇಟ್ಟ ಮೊದಲ ಹೆಜ್ಜೆ  ‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ ಎರಡು ದಶಕಗಳು ಕಳೆದಿವೆ. ಇಂತಹ ಒಳ್ಳೆ ಬುನಾದಿಯನ್ನು ನೀಡಿದ ಚಿತ್ರಕ್ಕೆ ಶ್ರಮಿಸಿದ ನಿರ್ದೇಶಕ. ನಿರ್ಮಾಪಕರು ಹಾಗೂ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ಪ್ರೀತಿಗೆ ನಾ ಸದಾ ಚಿರಋಣಿ ಎಂದು ಬರೆದುಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...