alex Certify ಮೆಟ್ರೋ ನಿಲ್ದಾಣದಲ್ಲಿ ದುರಂತ, ಪ್ಲಾಟ್‌ಫಾರ್ಮ್‌ನಿಂದ ಜಿಗಿದು ಮಹಿಳೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ನಿಲ್ದಾಣದಲ್ಲಿ ದುರಂತ, ಪ್ಲಾಟ್‌ಫಾರ್ಮ್‌ನಿಂದ ಜಿಗಿದು ಮಹಿಳೆ ಆತ್ಮಹತ್ಯೆ

ದೆಹಲಿಯಲ್ಲಿ ಚಲಿಸ್ತಾ ಇದ್ದ ಮೆಟ್ರೋ ರೈಲಿನ ಮುಂದೆ ಹಾರಿ ಮಹಿಳೆಯೊಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ. ದೆಹಲಿಯ ಜೋರ್‌ಭಾಗ್‌ ನಿಲ್ದಾಣದ ಹಳದಿ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಮೆಟ್ರೋ ರೈಲುಗಳ ಸಂಚಾರದಲ್ಲೂ ಕೆಲಕಾಲ ವ್ಯತ್ಯಯವಾಗಿತ್ತು.

ಮೆಟ್ರೋ ರೈಲು ಹುಡಾ ಸಿಟಿ ಸೆಂಟರ್‌ ಕಡೆಗೆ ಹೊರಟಿತ್ತು. ಈ ವೇಳೆ ಮಹಿಳೆ ಪ್ಲಾಟ್‌ಫಾರ್ಮ್‌ನಿಂದ ಜಿಗಿದಿದ್ದಾಳೆ. ಚಲಿಸ್ತಾ ಇದ್ದ ರೈಲಿಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಂಬ್ಯುಲೆನ್ಸ್‌ ಮೂಲಕ ಸಪ್ಧರ್‌ಗಂಜ್‌ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಆದ್ರೆ ಅಷ್ಟರಲ್ಲಾಗ್ಲೇ ಆಕೆ ಮೃತಪಟ್ಟಿದ್ದಳು.

ಮಹಿಳೆ ಆತ್ಮಹತ್ಯೆಗೆ ಮುಂದಾಗಲು ಕಾರಣ ಏನು ಅನ್ನೋದು ಪತ್ತೆಯಾಗಿಲ್ಲ. ಸ್ಥಳದಲ್ಲಿ ಡೆತ್‌ ನೋಟ್‌ ಕೂಡ ಸಿಕ್ಕಿಲ್ಲ. ಸದ್ಯ ಆಕೆಯ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಮಹಿಳೆಯ ಗುರುತು ಪತ್ತೆಯಾದ ಬಳಿಕ ಪೋಸ್ಟ್‌ ಮಾರ್ಟಮ್‌ ನಡೆಯಲಿದೆ. ನಂತರ ಕುಟುಂಬಸ್ಥರಿಗೆ ಶವವನ್ನು ಹಸ್ತಾಂತರಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...